WEATHER | ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರ್ಭಟ ಶುರು

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಆರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಂಗಳೂರು, ಬೆಳಗಾವಿ, ಶಿವಮೊಗ್ಗ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಇನ್ನೂ ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!