March 29, 2026
Sunday, March 29, 2026
spot_img

WEATHER | ರಾಜ್ಯದಲ್ಲಿ ಮಳೆರಾಯನ ಆಟ ಶುರು: 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹವಾಮಾನದಲ್ಲಿ ಬದಲಾವಣೆ ಕಂಡುಬಂದಿದ್ದು, ಕಳೆದ ಕೆಲವು ದಿನಗಳಿಂದ ಹಲವೆಡೆ ಗುಡುಗು ಸಹಿತ ಮಳೆಯಾಗುತ್ತಿದೆ. ಇಂದು ಕೂಡ ಕೆಲವು ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಹವಾಮಾನ ಇಲಾಖೆ ಮಾಹಿತಿಯಂತೆ, ಕಲಬುರ್ಗಿ, ವಿಜಯಪುರ, ಗದಗ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ 13 ಜಿಲ್ಲೆಗಳಿಗೆ ಎಚ್ಚರಿಕೆ ನೀಡಲಾಗಿದೆ.

ಇದೇ ವೇಳೆ, ಕೆಲವು ಭಾಗಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ. ದಕ್ಷಿಣ ಕನ್ನಡ ಸೇರಿದಂತೆ ಬೀದರ್, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆ ಎಂದು ಹೇಳಲಾಗಿದೆ.

ಇದನ್ನೂ ಓದಿ:

ಹಾಗೆಯೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಒಣ ಹವೆಯ ವಾತಾವರಣ ಇರಲಿದೆ.

ಒಟ್ಟಿನಲ್ಲಿ, ರಾಜ್ಯದಲ್ಲಿ ಮಳೆ ಮತ್ತು ಒಣ ಹವೆಯ ಮಿಶ್ರ ಪರಿಸ್ಥಿತಿ ಮುಂದುವರಿಯಲಿದ್ದು, ಸಾರ್ವಜನಿಕರು ಹವಾಮಾನ ಬದಲಾವಣೆಗೆ ಅನುಗುಣವಾಗಿ ಮುನ್ನೆಚ್ಚರಿಕೆ ವಹಿಸುವಂತೆ ಇಲಾಖೆ ಸೂಚಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !