ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ರಾಜ್ಯಾದ್ಯಂತ ಅಲ್ಲಲ್ಲಿ ಮಳೆಯಾಗುತ್ತಿದ್ದು, ನಾಳೆ ಬೆಳಗ್ಗೆ 8 ಗಂಟೆಯವರೆಗಿನ ಹವಾಮಾನ ವರದಿ ಇಲ್ಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಬಿಜಾಪುರ, ಗದಗ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಕೊಡಗು, ಹಾಸನ, ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಕೆಲವು ಭಾಗಗಳಲ್ಲಿ ಸಹ ಸಾಧಾರಣ ಮಳೆಯ ಮುನ್ಸೂಚೆನೆ ಇದೆ. ಉಳಿದ ಕರ್ನಾಟಕದ ಹೆಚ್ಚಿನ ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚೆನೆ ಇದೆ.
ಮುಂಗಾರು : ಪಶ್ಚಿಮ ಬಂಗಾಳದ ಕರಾವಳಿ ಭಾಗದಲ್ಲಿ ಜೂನ್ 12ನೇ ತಾರಿಕು ಮಧ್ಯಾಹ್ನ ಸಣ್ಣ ಪ್ರಮಾಣದ ವಾಯುಭಾರ ಕುಸಿತ ಉಂಟಾಗುವ ಮುನ್ಸೂಚೆನೆ ಇದೆ.
ಇದರ ಪರಿಣಾಮದಿಂದ ಒರಿಸ್ಸಾ, ಮಧ್ಯಪ್ರದೇಶ, ಮಹಾರಾಷ್ಟ್ರ, ತೆಲಂಗಾಣ ಹಾಗೂ ಉತ್ತರ ಆಂದ್ರಪ್ರದೇಶ ಭಾಗಗಳಲ್ಲಿ ಮಳೆಯ ಮುನ್ಸೂಚೆನೆ ಇದೆ.
ಇದು ಕರ್ನಾಟಕದ ಹವಾಮಾನದ ಮೇಲೆ ಅಷ್ಟೇನು ಪರಿಣಾಮ ಬೀರುವ ಸಾಧ್ಯತೆ ಕಡಿಮೆ ಮುಂಗಾರು ಮತ್ತಷ್ಟು ಬಲಗೊಳ್ಳುಲು ಸ್ವಲ್ಪ ಮಟ್ಟಿಗೆ ಸಹಾಯ ಮಾಡಬಹುದು.
ಈಗಿನ ಪ್ರಕಾರ ಬದಲಾವಣೆ ಇಲ್ಲದೆ ಕರಾವಳಿ ಜಿಲ್ಲೆಗಳಾದ್ಯಂತ 12ನೇ ತಾರೀಕಿನಿಂದ ಉತ್ತಮ ಮಳೆಯ ಮುನ್ಸೂಚೆನೆ ಇದೆ.
ಹವಾಮಾನ ಮಾಹಿತಿ: ಸಾಯಿಶೇಖರ್ ಕರಿಕ್ಕಳ