ಹವಾಮಾನ ವರದಿ: ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ವರ್ಷಧಾರೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮಳೆಗಾಗಿ ಜನರು ಹಪಹಪಿಸುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆಯಾಗಿದೆ.

ರಾಜ್ಯದ ಉತ್ತರ ಒಳನಾಡಿನ ಕೆಲವೆಡೆ ಮತ್ತು ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದ್ದು, ಇನ್ನೂ ಎರಡು ದಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏ 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಚಿತ್ರದುರ್ಗ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.

ಏ 21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!