Wednesday, February 21, 2024

WEATHER REPORT | ಕರಾವಳಿ, ಮಲೆನಾಡಲ್ಲಿ ಇಂದು ಮಳೆಯಾಗುವ ಸಾಧ್ಯತೆ

ಹೊಸದಿಂಗತ ಡಿಜಿಟಲ್ ಡೆಸ್ಕ್:

ಕರಾವಳಿಯಲ್ಲಿ ವ್ಯಾಪಕ ಮಳೆಯಾದರೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣ ಇದ್ದರೂ ಚಳಿಯು ಜನರನ್ನು ನಡುಗಿಸಲಿದೆ. ಈ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರಿ ಮಳೆಯಾದರೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ. ಮಲೆನಾಡಿನ ಕೊಡಗಿನಲ್ಲಿ ಮಳೆಯ ಸಿಂಚನವಾದರೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ.

ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಲ್ಲಿ ಮಳೆ ಮುನ್ಸೂಚನೆ ಇಲ್ಲ. ಬದಲಿಗೆ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಹಾವೇರಿ ಹಾಗೂ ಕಲಬುರಗಿ, ವಿಜಯಪುರ ಸೇರಿ ಯಾದಗಿರಿ, ರಾಯಚೂರು, ಕೊಪ್ಪಳ, ಗದಗದಲ್ಲಿ ಒಣಹವೆ ಇರಲಿದೆ ಎಂದು ವರದಿಯಾಗಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ತುಮಕೂರಲ್ಲೂ ಮೋಡ ಕವಿದ ವಾತಾವರಣ ಇರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!