Sunday, January 11, 2026

WEATHER | ರಾಜ್ಯದಲ್ಲಿ ತೀವ್ರ ಚಳಿ ಮುಂದುವರಿಕೆ: ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಹಲವು ಭಾಗಗಳಲ್ಲಿ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ತಾಪಮಾನದಲ್ಲಿ ಯಾವುದೇ ಬದಲಾವಣೆ ಕಾಣದ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮಂಜು, ಒಣ ಹವೆ ಹಾಗೂ ಶೀತಗಾಳಿ ಜನಜೀವನದ ಮೇಲೆ ಪರಿಣಾಮ ಬೀರುತ್ತಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳು ಚಳಿಯ ವಶದಲ್ಲಿವೆ.

ಬೆಂಗಳೂರು ನಗರದಲ್ಲಿ ಕಳೆದ ಎರಡು ದಿನಗಳಿಂದ ಕನಿಷ್ಠ ತಾಪಮಾನ ಸುಮಾರು 14 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಹಗಲಿನ ವೇಳೆಯಲ್ಲಿಯೂ ತಾಪಮಾನ ಕುಸಿತ ಕಂಡುಬಂದಿದ್ದು, ಮೋಡ ಮುಸುಕಿದ ವಾತಾವರಣ ಮುಂದುವರಿದಿದೆ. ಕೆಲವು ಭಾಗಗಳಲ್ಲಿ ತುಂತುರು ಮಳೆಯೂ ಸುರಿಯುತ್ತಿದೆ.

ಇದನ್ನೂ ಓದಿ: FOOD | ಮಧ್ಯಾಹ್ನ ಊಟಕ್ಕೆ ಹೊಸತಾಗಿ ಏನಾದ್ರು ಮಾಡ್ಬೇಕಂತಿದ್ರೆ ದಹಿ ಆಲೂ ಟ್ರೈ ಮಾಡಿ

ಅತಿಯಾದ ಶೀತದ ಹಿನ್ನೆಲೆಯಲ್ಲಿ ಬೀದರ್, ಕಲಬುರಗಿ, ಧಾರವಾಡ ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ–ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ. ಜನವರಿ 14ರವರೆಗೆ ಕೆಲವು ಭಾಗಗಳಲ್ಲಿ ಮಂಜು ಮತ್ತು ಶೀತಗಾಳಿ ಬೀಸುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿಯೂ ಒಣ ಹವೆಯಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಈಗಿರುವ ಚಳಿ ಮುಂದುವರಿಯುವ ನಿರೀಕ್ಷೆಯಿದೆ.  

Related articles

Comments

ಇತರರಿಗೂ ಹಂಚಿ

Latest articles

Newsletter

error: Content is protected !!