WEATHER | ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಗರಿಷ್ಠ ತಾಪಮಾನದಲ್ಲಿ ಭಾರೀ ಏರಿಕೆ

ರಾಜ್ಯದ ಹಲವೆಡೆ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಉತ್ತರ ಕರ್ನಾಟಕದಲ್ಲಿ ಉಷ್ಣಾಂಶ ಏರಿಕೆ ಕಂಡಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ 40 ಡಿಗ್ರಿ ಸನಿಹಕ್ಕೆ ಬಂದಿದೆ. ಕಲಬುರಗಿಯಲ್ಲೂ ತಾಪಮಾನ ಹೆಚ್ಚಾಗಿದೆ. ಹಲವೆಡೆ 36 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗಿದೆ.

ಕಾರವಾರ, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ಎಂಟಕ್ಕೂ ಅಧಿಕ ಜಿಲ್ಲೆಗಳಲ್ಲಿ 35 ಡಿಗ್ರಿಗೂ ಅಧಿಕ ಉಷ್ಣಾಂಶ ದಾಖಲಾಗುತ್ತಿದೆ. ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಒಣಹವೆ ಮುಂದುವರಿಯಲಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!