ಕರ್ನಾಟಕದಾದ್ಯಂತ ಜೂನ್ 8ರವರೆಗೂ ಸಾಧಾರಣ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಎಚ್ಎಎಲ್ನಲ್ಲಿ 30.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.