June 26, 2026
Friday, June 26, 2026
spot_img

WEATHER | ರಾಜ್ಯಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ನೈಋತ್ಯ ಮುಂಗಾರು ಮಾರುತಗಳು ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರಾವಳಿ ಭಾಗಕ್ಕೆ ಆರೆಂಜ್ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 29ರವರೆಗೆ ‘ಯೆಲ್ಲೋ ಅಲರ್ಟ್’ ಇರಲಿದ್ದು, ಜೂನ್ 29ರಿಂದ ಜುಲೈ 1ರವರೆಗೆ ಮಳೆಯ ತೀವ್ರತೆ ಮತ್ತಷ್ಟು ಹೆಚ್ಚಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಅವಧಿಯಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ.

ಉತ್ತರ ಕರ್ನಾಟಕದಲ್ಲಿ ಸಾಧಾರಣ ಮಳೆ

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ ಜಿಲ್ಲೆಗಳ ಹಲವೆಡೆ ಬಿರುಗಾಳಿ ಸಹಿತ ಮಧ್ಯಮ ಮಳೆಯಾಗಲಿದೆ. ಇನ್ನು ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದು, ಜೂನ್ 29ರ ನಂತರ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಜಾರಿಯಲ್ಲಿರಲಿದೆ.

ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಸ್ಥಿತಿ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ತುಮಕೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲೂ ಬಲವಾದ ಗಾಳಿಯೊಂದಿಗೆ ಸಾಧಾರಣ ಮಳೆ ನಿರೀಕ್ಷಿಸಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !