November 4, 2026
Wednesday, November 4, 2026
spot_img

WEATHER | ವರುಣನ ರೌದ್ರ ರೂಪಕ್ಕೆ ರಾಜ್ಯ ತತ್ತರ: ಹಲವೆಡೆ ಭಾರೀ ಮಳೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಾದ್ಯಂತ ಮಳೆಯ ಚಟುವಟಿಕೆ ತೀವ್ರಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲ ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮಳೆ ಚಟುವಟಿಕೆ ಮುಂದುವರಿಯುವ ಲಕ್ಷಣಗಳು ಕಾಣಿಸುತ್ತಿವೆ.

ಇದನ್ನೂ ಓದಿ:

ಉತ್ತರ ಒಳನಾಡಿನಲ್ಲಿ ಬಲವಾದ ಗಾಳಿ

ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯ ಸಾಧ್ಯತೆ ಇದೆ. ಜೊತೆಗೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಬಾಗಲಕೋಟೆ ಭಾಗಗಳಲ್ಲಿ ಕೂಡ ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ವ್ಯಕ್ತವಾಗಿದೆ.

ದಕ್ಷಿಣ ಒಳನಾಡು ಹಾಗೂ ಬೆಂಗಳೂರು ಪರಿಸ್ಥಿತಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಜಿಟಿಜಿಟಿ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ಅಗತ್ಯ ಎಂದು ಇಲಾಖೆ ತಿಳಿಸಿದೆ.

Must Read