July 19, 2026
Sunday, July 19, 2026
spot_img

WEATHER|‌ ರಾಜ್ಯಾದ್ಯಂತ ವರುಣನ ಆರ್ಭಟ: ಹಲವು ಜಿಲ್ಲೆಗಳಿಗೆ ಬಿರುಗಾಳಿ ಸಹಿತ ಭಾರೀ ಮಳೆಯ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ರಾಜ್ಯದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಜತೆಗೆ ಗಂಟೆಗೆ 50 ಕಿ.ಮೀ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಕರಾವಳಿ ತೀರದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಮುಂದುವರಿದ ಅಬ್ಬರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಲವಾದ ಗಾಳಿ ಬೀಸಲಿದ್ದು, ಸಮುದ್ರ ಮತ್ತು ನದಿ ತೀರದ ನಿವಾಸಿಗಳು ಹಾಗೂ ಮೀನುಗಾರರು ಕಡ್ಡಾಯವಾಗಿ ಸುರಕ್ಷಿತ ಸ್ಥಳಗಳಲ್ಲಿರಲು ಸೂಚಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಗಾಳಿ ಸಹಿತ ಮಳೆ

ಬೆಳಗಾವಿ, ಧಾರವಾಡ, ಗದಗ್, ಬೀದರ್, ಕಲಬುರಗಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದಿದ್ದರೂ ಬಲವಾದ ಗಾಳಿ ಬೀಸಲಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಎಂದು ಎಚ್ಚರಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲೂ ಮಳೆ-ಗಾಳಿಯ ಜುಗಲ್‌ಬಂದಿ

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಚಿಕ್ಕಮಗಳೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಚಾಮರಾಜನಗರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಈ ಎಲ್ಲಾ ಜಿಲ್ಲೆಗಳಲ್ಲೂ ಮಳೆಯೊಂದಿಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !