March 14, 2026
Saturday, March 14, 2026
spot_img

WEATHER | ಕರ್ನಾಟಕದಲ್ಲಿ ಸೂರ್ಯ ದೇವನ ಕೃಪೆ ಹೆಚ್ಚಾಗ್ತಿದೆ: ಮುಂದಿನ ವಾರ ಉಷ್ಣಾಂಶ ಮತ್ತಷ್ಟು ಏರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕರ್ನಾಟಕದಲ್ಲಿ ಬೇಸಿಗೆಯ ಪ್ರಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ವಾರದಿಂದ ರಾಜ್ಯದ ಹಲವೆಡೆ ಉಷ್ಣಾಂಶ ಇನ್ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ತಾಪಮಾನವು 35 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬೆಳಗ್ಗಿನ ವೇಳೆಯಲ್ಲಿ ತುಸು ಚಳಿ ಅನುಭವವಾಗಲಿದ್ದು, ಮಧ್ಯಾಹ್ನ ವೇಳೆಗೆ ಬಿಸಿಲಿನ ತೀವ್ರತೆ ಹೆಚ್ಚಾಗಲಿದೆ. ರಾಜ್ಯದಾದ್ಯಂತ ಒಣಹವೆ ಮುಂದುವರಿಯಲಿದ್ದು, ಮೋಡಮೂಡಿದ ಹವಾಮಾನ ಅಥವಾ ಮಳೆಯ ಸಾಧ್ಯತೆ ಕಡಿಮೆ ಎಂದು ತಿಳಿಸಲಾಗಿದೆ. ಮುಂದಿನ ಏಳು ದಿನಗಳ ಕಾಲ ಹವಾಮಾನವು ಹೆಚ್ಚಾಗಿ ಶುಷ್ಕ ಹಾಗೂ ಬಿಸಿಲಿನಿಂದ ಕೂಡಿರಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ:

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಭಾಗಗಳಲ್ಲಿ ಹೆಚ್ಚಿನ ಆದ್ರ್ರತೆ ಕಂಡುಬಂದರೆ, ಉತ್ತರ ಒಳನಾಡು ಪ್ರದೇಶಗಳಲ್ಲಿ ತೀವ್ರ ಶಾಖ ಜನಜೀವನಕ್ಕೆ ತೊಂದರೆ ಉಂಟುಮಾಡುವ ಸಾಧ್ಯತೆ ಇದೆ. ಬಿಸಿಲಿನ ನಡುವೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಹವಾಮಾನ ಇಲಾಖೆ ಸಲಹೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !