ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚುತ್ತಿದೆ. ಕೆಲವೆಡೆ ಸಾಧಾರಣ ಮಳೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಆಗುಂಬೆಯಲ್ಲಿ ಗರಿಷ್ಠ ತಾಪಮಾನ 2.9 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗಿದೆ. ಗರಿಷ್ಠ ತಾಪಮಾನವು ಕರಾವಳಿಯಲ್ಲಿ 34-35 ಡಿಗ್ರಿ ಸೆಲ್ಸಿಯಸ್ನಷ್ಟಿದೆ.
ಇನ್ನು ಕನಿಷ್ಠ ತಾಪಮಾನವು ಕರಾವಳಿಯಲ್ಲಿ 23-24 ಡಿಗ್ರಿ ಸೆಲ್ಸಿಯಸ್ನಷ್ಟಿದೆ, ಬೆಳಗಾವಿ, ಬೀದರ್, ವಿಜಯಪುರ, ಧಾರವಾಡ, ರಾಯಚೂರು, ಹಾವೇರಿ, ಬಾಗಲಕೋಟೆ, ಗದಗದಲ್ಲಿ 17-18 ಡಿಗ್ರಿ ಸೆಲ್ಸಿಯಸ್, ಕಲಬುರಗಿ, ಕೊಪ್ಪಳದಲ್ಲಿ 19-21 ಡಿಗ್ರಿ ಸೆಲ್ಸಿಯಸ್, ದಾವಣಗೆರೆ, ಹಾಸನ, ಮಂಡ್ಯ ಮತ್ತು ಮಡಿಕೇರಿಯಲ್ಲಿ 13-18 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.