WEATHER | ಬಿಸಿಲಿನ ತಾಪ ಹೆಚ್ಚಳ, ಇನ್ನೊಂದು ವಾರ ಎಲ್ಲೆಲ್ಲಿ ಮಳೆ ಸಾಧ್ಯತೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇನ್ನು ಐದು ದಿನಗಳಲ್ಲಿ ಅಂದರೆ ಏಪ್ರಿಲ್ 11ರವರೆಗೆ ಕರ್ನಾಟಕದಲ್ಲಿ ಬಿಸಿಲಿನ ಝಳ ಹೆಚ್ಚಲಿದೆ. ಮುಂದಿನ ಎರಡು ದಿನಗಳಲ್ಲಿ ಕರ್ನಾಟಕದ ಒಳನಾಡಿನ ಕೆಲವು ಸ್ಥಳಗಳಲ್ಲಿ ತಾಪಮಾನವು ಸುಮಾರು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಮುಂದಿನ ಮೂರು ದಿನಗಳಲ್ಲಿ ದೇಶದ ಕೆಲವು ಸ್ಥಳಗಳಲ್ಲಿ 2 ಡಿಗ್ರಿ ಸೆಲ್ಸಿಯಸ್ ತಾಪಮಾನದಲ್ಲಿ ಕ್ರಮೇಣ ಇಳಿಕೆ ಕಂಡುಬರಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಭಾನುವಾರ ಮತ್ತು ಸೋಮವಾರ ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಹಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರಗಿ, ಕೊಡಗು, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!