ಗರಿಷ್ಠ ತಾಪಮಾನದಲ್ಲಿ ಭಾರೀ ಏರಿಕೆ ಆಗುತ್ತಿದ್ದು, ರಾಜ್ಯದಲ್ಲಿ ಮಾರ್ಚ್ 12ರವರೆಗೂ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 3 ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿಲಿನ ಅಬ್ಬರ ಇರಲಿದ್ದು, ಜನರನ್ನು ಹೈರಾಣಾಗಿಸಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.