WEATHER: ರಾಜ್ಯದಲ್ಲಿ ಬಿಸಿಲಿನ ಝಳ ಮತ್ತೆ ಹೆಚ್ಚಳ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ಸೇರಿದಂತೆ ಹಲವೆಡೆ ಶುಷ್ಕ ವಾತಾವರಣ ಇರಲಿದೆ. ಹವಾಮಾನ ಇಲಾಖೆಯು ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಭಾಗದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ ಮತ್ತು ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗಲಿದೆ. ಹೆಚ್ಚುವರಿಯಾಗಿ, ಉತ್ತರದ ಒಳಭಾಗದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿಗಳಷ್ಟು ಹೆಚ್ಚಾಗುತ್ತದೆ ಎನ್ನಲಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕೆಲವು ಕರಾವಳಿ ಪ್ರದೇಶಗಳಲ್ಲಿ ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ನಿರೀಕ್ಷೆಯಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!