ಇಂದು ರಾಜ್ಯದ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕೆಲವೆಡೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರದಲ್ಲಿ ಕೆಲವೆಡೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಗುಡುಗು, ಮಿಂಚು ಮತ್ತು ಗಾಳಿ ಜೊತೆಗೆ ಭಾರೀ ಮಳೆಯಾಗುವ ಸಾಧ್ಯತೆಯನ್ನು ಉಲ್ಲೇಖಿಸಿ ಭಾರತೀಯ ಹವಾಮಾನ ಇಲಾಖೆ ಗುರುವಾರ ದೇಶದ ಉತ್ತರ ಭಾಗಗಳಿಗೆ ಆರೆಂಜ್ ಅಲರ್ಟ್ ನೀಡಿದೆ.