ಮುಂದಿನ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಉಂಟಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 30 ರವರೆಗೆ ಶಾಖದ ಅಲೆ ಇರುತ್ತದೆ.
ವಿಶೇಷವಾಗಿ ಉತ್ತರದ ಒಳ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಾಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಬಳ್ಳಾರಿ, ವಿಜಯನಗರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ದಾವಣಗೆರೆ, ಚಿತ್ರದುರ್ಗ, ತುಮಕೂರು, ಸೇರಿದಂತೆ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಏರಿಕೆಯೊಂದಿಗೆ ಬಿಸಿಗಾಳಿ ತೀವ್ರಗೊಳ್ಳುವ ಸಾಧ್ಯತೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಏಪ್ರಿಲ್ 28 ರಿಂದ ಮೇ 1 ರವರೆಗೆ ಬಿಸಿ ಮತ್ತು ಆರ್ದ್ರ ವಾತಾವರಣ ಇರಲಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದಲ್ಲಿ ಗರಿಷ್ಠ ತಾಪಮಾನ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.