ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಾದ್ಯಂತ ಒಣ ಹವೆ ಚಾಲ್ತಿಯಲ್ಲಿದ್ದರೆ, ಪ್ರತ್ಯೇಕ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆ. ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಮಂಡ್ಯ ಹಾಗೂ ದಕ್ಷಿಣದ ಮೈಸೂರಿನಲ್ಲಿ ಲಘು ಮಳೆಯಾಗಲಿದೆ. ಇತರ ಪ್ರದೇಶಗಳಲ್ಲಿ ಶುಷ್ಕ ಗಾಳಿಯು ಮೇಲುಗೈ ಸಾಧಿಸುವ ಸಾಧ್ಯತೆಯಿದೆ.
ಬೆಂಗಳೂರು ಭಾಗದಲ್ಲಿ ಬೆಳಗ್ಗೆ ದಟ್ಟ ಮಂಜು ಕವಿದಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರುತ್ತದೆ.
ಇನ್ನೆರಡು ದಿನಗಳಲ್ಲಿ ರಾಜ್ಯದ ಕೆಲವೆಡೆ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರಿಂದಾಗಿ ಇನ್ನೆರಡು ದಿನಗಳಲ್ಲಿ ಬಿಸಿಲಿನ ತೀವ್ರತೆ ಹೆಚ್ಚಲಿದ್ದು, ಸೆಕೆ ವಾತಾವರಣ ಇರಲಿದೆ.