October 15, 2026
Thursday, October 15, 2026
spot_img

WEATHER | ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿದೆ ತಾಪಮಾನ: ಬೇಸಿಗೆಗೂ ಮುನ್ನವೇ ಕೆಂಡದಂತಹ ವಾತಾವರಣ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಹೆಚ್ಚುತ್ತಲೇ ಇದ್ದು, ಮುಂದಿನ 48 ಗಂಟೆಗಳಲ್ಲಿ ಮತ್ತಷ್ಟು ಏರಿಕೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದರ ನಡುವೆಯೂ ಬೇಸಿಗೆಯಲ್ಲೂ ಮಳೆ ಎಚ್ಚರಿಕೆ ನೀಡಲಾಗಿದೆ.

ಇದರ ನಡುವೆ ಕೆಲವಡೆ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಗುಡುಗು ಸಹಿತ ವಾತಾವರಣ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿ ಮಾಡಿದೆ.

ಬೆಂಗಳೂರಲ್ಲಿ 32 ಡಿ.ಸೆ ಗರಿಷ್ಠ ಉಷ್ಣಾಂಶ ಹಾಗೂ 19.6 ಕನಿಷ್ಟ ಉಷ್ಣಾಂಶ ದಾಖಲಾಗಿದೆ. ಕಲಬುರಗಿ, ಬಳ್ಳಾರಿಯಲ್ಲಿ ಬೇಸಿಗೆಗೂ ಮುನ್ನ 35 ಡಿಗ್ರಿ ಸೆಲ್ಸಿಯಸ್ ತಲುಪಿದೆ ಉಷ್ಣಾಂಶ ದಾಖಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆವಿದೆ.

ತುಮಕೂರು, ಚಿತ್ರದುರ್ಗ, ಕಾರವಾರ, ರಾಯಚೂರು, ಕೊಪ್ಪಳ ಸೇರಿದಂತೆ ಹಲವು ಜಿಲ್ಲೆಗಳಲ್ಲಿ 34 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಇಂದು ಕೆಲ ಜಿಲ್ಲೆಗಳಲ್ಲಿ ಮಳೆಯ ಅಬ್ಬರದ ಸಾಧ್ಯತೆ ಇದೆ. ಮುಖ್ಯವಾಗಿ ರಾಜ್ಯದ ಐದು ಜಿಲ್ಲೆಗಳಿಗೆ ಮಳೆ ಎಚ್ಚರಿಕೆ ನೀಡಲಾಗಿದೆ ಕಲಬುರಗಿ, ವಿಜಯಪುರ, ಚಿಕ್ಕಮಗಳೂರು, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕುರಿತು ಮುನ್ಸೂಚನೆ ನೀಡಿದೆ.

Must Read