ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲಿನ ಅಬ್ಬರ ಜೋರಾಗಿದೆ. ಇಂದು ಸಹ ಬಿಸಿಲಿನ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಹಲವು ಜಿಲ್ಲೆಗಳಲ್ಲಿ ಉಷ್ಣ ಅಲೆಯ ಬಿಸಿ ತಟ್ಟಲಿದೆ ಎಂದು ಇಲಾಖೆ ವರದಿ ಮಾಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.