ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದೆ. ಕರಾವಳಿಯಲ್ಲಿ ಮತ್ತೆ ಉಷ್ಣಾಂಶ ಏರಿಕೆ ಕಂಡಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದೊಂದು ವಾರದಿಂದ ಕರಾವಳಿಯಲ್ಲಿ ಬಿಸಿಲು ಅಬ್ಬರಿಸುತ್ತಿದೆ. ವಿಜಯಪುರ, ಗದಗ, ಬಾಗಲಕೋಟೆ, ಚಿತ್ರದುರ್ಗದ ಸೇರಿದಂತೆ ಹಲವೆಡೆ ಅಧಿಕ ಉಷ್ಣಾಂಶ ದಾಖಲಾಗಿದೆ.
ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.