ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ, ದಕ್ಷಿಣ, ಕರಾವಳಿ ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ದಕ್ಷಿಣ ಒಳನಾಡಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.