ಕಳೆದ ಎರಡು ದಿನಗಳಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ಗುಡ್ಡಗಾಡು ಪ್ರದೇಶಗಳಲ್ಲಿ ಇಂದು ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಸೇರಿದಂತೆ ಕೆಲವು ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.