ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಭಾಗಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಇಂದು ಬಿಸಿಲು ಮತ್ತು ಶುಷ್ಕವಾಗಿರುತ್ತದೆ. ಕೆಲವೆಡೆ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರುತ್ತದೆ.