Saturday, January 10, 2026

WEATHER | ಕರ್ನಾಟಕಕ್ಕೆ ಮೂರು ದಿನ ಮಳೆ ಭೀತಿ: ಕರಾವಳಿ, ದಕ್ಷಿಣದಲ್ಲಿ ಶುಷ್ಕ ವಾತಾವರಣ

ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಮುಂಜಾನೆಯ ವೇಳೆಗೆ ಮತ್ತು ಸಂಜೆಯ ಸಮಯದಲ್ಲಿ ಚಳಿ ಹೆಚ್ಚಾಗಲಿದೆ.

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ತೀವ್ರವಾಗಿ ಹೆಚ್ಚಾಗಿದ್ದು, ಶೀತಗಾಳಿ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿ, ಬಾಗಲಕೋಟೆ, ಬೀದರ್, ವಿಜಯಪುರ, ಕಲಬುರಗಿ ಮತ್ತು ಧಾರವಾಡ ಜಿಲ್ಲೆಗಳಿಗೆ ಶೀತಗಾಳಿ ಎಚ್ಚರಿಕೆ ನೀಡಲಾಗಿದೆ.

ಬೀದರ್ ಮತ್ತು ಬೆಳಗಾವಿ ಸೇರಿದಂತೆ ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು ಐದು ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆಯಿದೆ.

ಮುಂದಿನ ಎರಡು ದಿನಗಳಲ್ಲಿ ನಗರದ ಕೆಲವು ಭಾಗಗಳಲ್ಲಿ ಕನಿಷ್ಠ ತಾಪಮಾನವು 13.1°C ಗೆ ಇಳಿಕೆಯಾಗುವ ನಿರೀಕ್ಷೆಯಿದೆ, ಇದು ಹಗಲು ಮತ್ತು ರಾತ್ರಿ ತಾಪಮಾನದಲ್ಲಿ ಗಮನಾರ್ಹ ವ್ಯತ್ಯಾಸಕ್ಕೆ ಕಾರಣವಾಗಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಮುಂದುವರಿಯಲಿದೆ.

error: Content is protected !!