ಮುಂದಿನ ಐದು ದಿನಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 4 ಡಿಗ್ರಿ ಸೆಲ್ಸಿಯಸ್‌ನಷ್ಟು ಕಡಿಮೆಯಾಗುವ ನಿರೀಕ್ಷೆಯಿದೆ. ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಗುಡ್ಡಗಾಡು ಪ್ರದೇಶಗಳಾದ ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಹಾಗೂ ದಕ್ಷಿಣ ಭಾಗದಲ್ಲಿ ಮೈಸೂರು, ಚಾಮರಾಜನಗರದಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ಗುಡುಗು ಸಹಿತ ಭಾರಿ ಮಳೆಯಾಗಲಿದೆ.