ರಾಜ್ಯದಲ್ಲಿ ಬಿರು ಬಿಸಿಲಿನ ನಡುವೆಯು ಮೇ 12ರ ಬಳಿಕ ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ರಾಜ್ಯದ ವಿವಿಧ ಜಿಲ್ಲೆಗಳಲಿ ಮಳೆ ಮುಂದುವರಿಲಿದೆ. ದಕ್ಷಿಣ ಕನ್ನಡ, ಬೆಳಗಾವಿ, ಮಡಿಕೇರಿ, ಚಿತ್ರದುರ್ಗ, ಗದಗ ಜಿಲ್ಲೆಗಳಲ್ಲಿ ಜೋರು ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಬಿಸಿಲು ಮತ್ತು ಒಣಹವೆಯ ವಾತಾವರಣ ಇರಲಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.