ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹಲವೆಡೆ ಭಾರಿ ಮಳೆಯಾಗುತ್ತಿದ್ದು. ಇದರ ನಡುವೆಯೂ ಮುಂದಿನ 6 ದಿನಗಳ ಕಾಲ ಕರಾವಳಿ ಹಾಗೂ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ ಹಾಗೂ ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.