ವರುಣಾರ್ಭಟಕ್ಕೆ ರಾಜ್ಯ ತತ್ತರ; ಇಂದು ಹಲೆವೆಡೆ ಭಾರೀ ಮಳೆಯಾಗುವ ಮುನ್ಸೂಚನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ನೈಋತ್ಯ ಮುಂಗಾರು ಪ್ರವೇಶಕ್ಕೂ ಮುನ್ನವೇ ಗುಡುಗು, ಸಿಡಿಲಿನ ಜೊತೆಗೆ ರಂಗಪ್ರವೇಶ ಮಾಡಿರುವ ವರುಣನ ಧಿಂಗಿಣಕ್ಕೆ ರಾಜ್ಯದ ಬಹುತೇಕ ಭಾಗಗಳು ತತ್ತರಿಸಿಹೋಗಿವೆ.
ಕೇರಳದ ಪ್ರಭಾವ ಎಂಬಂತೆ ಕರಾವಳಿ ಭಾಗದಲ್ಲಿ ಕಳೆದ‌ ಒಂದೆರಡು ದಿನಗಳಿಂದ ಭರ್ಜರಿ ಮಳೆಯಾಗುತ್ತಿದೆ.
ಮುಸಲಧಾರೆಗೆ ರಾಜ್ಯದ ಹಲವೆಡೆಗಳಲ್ಲಿ ಅಪಾರ ನಾಶ, ನಷ್ಟ ಉಂಟಾಗಿದೆ.
ಮೇ 20ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಉಡುಪಿ ಹಾಗೂ ಉತ್ತರ ಕನ್ನಡ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ನಿರೀಕ್ಷಿಸಲಾಗಿದೆ.
ಇನ್ನು ಕೊಡಗು, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ಇದ್ದರೆ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಪಾವಗಢ, ಬಳ್ಳಾರಿ, ರಾಯಚೂರು, ಹಾವೇರಿ ಜಿಲ್ಲೆಗಳಲ್ಲಿ ಭಾರಿ ಹಾಗೂ ಯಾದಗಿರಿ, ಬೀದರ್, ಗುಲ್ಬರ್ಗ, ವಿಜಾಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!