ಹೊಸದಿಗಂತ ಡಿಜಿಟಲ್ ಡೆಸ್ಕ್
ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಶಿಥಿಲಗೊಳ್ಳುತ್ತಿದ್ದರೂ ಮಳೆಯ ವಾತಾವರಣ ಮುಂದುವರಿಯಲಿದೆ.
ಏ.16ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯಂತೆ ರಾಜ್ಯದ ಕೊಡಗು, ಆಗುಂಬೆ, ಶಿೃಂಗೇರಿ, ಕೊಪ್ಪ, ತೀರ್ಥಹಳ್ಳಿ, ಹೊಸನಗರ, ಸಾಗರ, ಚಾಮರಾಜನಗರ ಸುತ್ತಮುತ್ತ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕಾಸರಗೋಡು ಸೇರಿದಂತೆ ದಕ್ಷಿಣ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಉಡುಪಿ, ಉತ್ತರ ಕನ್ನಡದ ಹೆಚ್ಚಿನ ಭಾಗಗಳಲ್ಲಿ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ವಿಜಯಪುರ, ಬೀದರ್, ಗುಲ್ಬರ್ಗ, ಕೊಪ್ಪಳ, ರಾಯಚೂರು, ದಾವಣಗೆರೆ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಉಳಿದಂತೆ ರಾಜ್ಯದ ಇತರ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ತುಂತುರು ಮಳೆಯ ಸಾಧ್ಯತೆ ಇದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ