WEATHER | ಇಂದು ರಾಜ್ಯದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆ ಸುರಿಯುವ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ತಿಳಿಸಿದೆ.

ಅದೇ ರೀತಿ ಬಳ್ಳಾರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗದಲ್ಲಿ ಕೆಲವೆಡೆ ಗುಡುಗು ಸಹಿತ ಸಾಧಾರಣ ಮಳೆ ಬೀಳುವ ನಿರೀಕ್ಷೆಯಿದೆ.

ತುಮಕೂರು, ವಿಜಯನಗರ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!