WEATHER | ಕರಾವಳಿ ಜಿಲ್ಲೆಗಳಲ್ಲಿ ರಣಭೀಕರ ಮಳೆ, ರೆಡ್ ಅಲರ್ಟ್​ ಘೋಷಣೆ

ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರ ಸೃಷ್ಟಿಯಾಗಿದೆ. ಇನ್ನೂ ಒಂದು ವಾರ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಕರ್ನಾಟಕದಲ್ಲಿ ಈ ದಿನ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಹಾಗಾಗಿ ಮೀನುಗಾರರು ಜೂನ್ 30ರವರೆಗೆ ಸಮುದ್ರ ಪ್ರದೇಶಗಳಿಗೆ ಪ್ರವೇಶಿಸದಂತೆ ಸೂಚಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!