ರಾಜ್ಯಾದ್ಯಂತ ಭಾರೀ ಮಳೆಯಾಗಲಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗುಡ್ಡಗಾಡು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಉತ್ತರ ಭಾಗದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ಭಾರೀ ಮಳೆ ಮತ್ತು ನಿರಂತರ ಗಾಳಿಯ ಸಾಧ್ಯತೆಯಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.