ಹೊಸದಿಗಂತ ಡಿಜಿಟಲ್ ಡೆಸ್ಕ್:
ದೇಶದಲ್ಲಿ ಇಂದಿನಿಂದ ಚಳಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಇತರ ಪ್ರಮುಖ ನಗರಗಳಲ್ಲಿ ಸಂಜೆಯಿಂದ ಸೂರ್ಯೋದಯದವರೆಗೂ ಮಂಜು ಕವಿದ ವಾತಾವರಣ ಗೋಚರವಾಗಲಿದೆ.
ರಾಜಧಾನಿ ದೆಹಲಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 13.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಮುಂದಿನ 24-48 ಗಂಟೆಗಳಲ್ಲಿ ರಾಜಧಾನಿಯಲ್ಲಿ ಮಳೆಯಾಗುವ ಮುನ್ಸೂಚನೆಯಿಲ್ಲ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ಭಾರತದ ಇತರ ಪ್ರಮುಖ ನಗರಗಳಲ್ಲಿ ವಾತಾವರಣ ತಿಳಿಯಾಗಲಿದೆ.
ತೀವ್ರ ಮಂಜಿನಿಂದಾಗಿ ವಾಹನ ಚಾಲಕರು ನಿಧಾನವಾಗಿ ಮತ್ತು ಜಾಗರೂಕರಾಗಿ ವಾಹನ ಚಲಾಯಿಸಬೇಕು. ದೇಶದ ಆರ್ಥಿಕ ರಾಜಧಾನಿ ಮುಂಬೈನ ತಾಪಮಾನವು 18 ರಿಂದ 28 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ. ದೇಶದ ಗುಡ್ಡಗಾಡು ಪ್ರದೇಶಗಳಾದ ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡದ ಮೇಲಿನ ಭಾಗಗಳಲ್ಲಿ ಮುಂದಿನ 24-48 ಗಂಟೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.