ದಕ್ಷಿಣ ಕನ್ನಡ ಹಾಗೂ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಚ ಬಿಡುವು ನೀಡಿದ್ದ ವರುಣ ಈ ವಾರ ಮತ್ತೆ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಕೋಲಾರ, ಮಂಡ್ಯ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಹಾಸನದ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಕೆಲವೆಡೆ ಲಘು ಮಳೆಯಾಗಿದೆ. ಹವಾಮಾನ ಇಲಾಖೆ ಪ್ರಕಾರ, ರಾಜ್ಯದ ಇತರ ಭಾಗಗಳಲ್ಲಿ ಶುಷ್ಕ ವಾತಾವರಣದ ಸಾಧ್ಯತೆಯಿದೆ.