ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮಳೆಯ ವಾತಾವರಣ ಇನ್ನೂ ಕೆಲವು ದಿನಗಳ ಕಾಲ ಮುಂದುವರಿಯುವ ಸಾಧ್ಯತೆಯಿದೆ ಎಂದು ಬೆಂಗಳೂರಿನ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ ೭ ಮತ್ತು ೮ ರಂದು ರಾಜ್ಯದ ಹಲವು ಭಾಗಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುವ ಲಕ್ಷಣಗಳಿದ್ದು, ಜನಸಾಮಾನ್ಯರು ಹಾಗೂ ರೈತರು ಸೂಕ್ತ ಮುನ್ನೆಚ್ಚರಿಕೆ ವಹಿಸಲು ತಿಳಿಸಲಾಗಿದೆ.
ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ಮಲೆನಾಡು ಭಾಗಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಸಿಡಿಲು-ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.
ಬೆಂಗಳೂರಿನಲ್ಲಿ ಹಗುರ ಮಳೆ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಡ್ಯ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಸಂಜೆ ಅಥವಾ ರಾತ್ರಿ ವೇಳೆಗೆ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ
ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣವೇ ಇರಲಿದೆ. ಇದರ ಜೊತೆಗೆ ಚಿಕ್ಕಬಳ್ಳಾಪುರ, ಕೋಲಾರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಒಣಹವೆ ಇರಲಿದೆ.



