April 9, 2026
Thursday, April 9, 2026
spot_img

WEATHER | ಮುಂದಿನ 10 ದಿನಗಳ ಕಾಲ ರಾಜ್ಯದಲ್ಲಿ ವರುಣಾರ್ಭಟ: 7 ಜಿಲ್ಲೆಗಳಲ್ಲಿ ಆರೆಂಜ್​ ಅಲರ್ಟ್

ಇಂದು ಕರ್ನಾಟಕದಲ್ಲಿ ಭಾರಿ ಮಳೆಯ ಆರ್ಭಟ ಮುಂದುವರಿಯಲಿದೆ. ಹವಾಮಾನ ಇಲಾಖೆ ರಾಜ್ಯದ 7 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದ್ದು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಎಚ್ಚರಿಕೆ ನೀಡಿದೆ.

ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಮತ್ತು ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆರೆಂಜ್ ಅಲರ್ಟ್ ಎಚ್ಚರಿಕೆ:

ದಕ್ಷಿಣ ಒಳನಾಡು ಭಾಗದ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಮತ್ತು ಹಾಸನ ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದೆ. ಅಂದರೆ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲೂ ಭಾರಿ ಪ್ರಮಾಣದ ಮಳೆಯಾಗಲಿದ್ದು, ಇಲ್ಲಿಯೂ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮುನ್ನೆಚ್ಚರಿಕೆಯಾಗಿ, ಮಳೆಯ ಜೊತೆಗೆ ಗಾಳಿಯ ವೇಗವು ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಯೆಲ್ಲೋ ಅಲರ್ಟ್ ಮತ್ತು ಸಾಧಾರಣ ಮಳೆ:

ದಕ್ಷಿಣ ಒಳನಾಡು: ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬಳ್ಳಾರಿ ಮತ್ತು ವಿಜಯನಗರದಲ್ಲಿ ಮೋಡ ಕವಿದ ವಾತಾವರಣ ಅಥವಾ ತುಂತುರು ಮಳೆಯ ನಿರೀಕ್ಷೆ ಇದೆ.

ಬೆಂಗಳೂರಿನ ಹವಾಮಾನ:

ರಾಜಧಾನಿ ಬೆಂಗಳೂರಲ್ಲಿ ನಾಳೆ ಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ಇದೆ. ಶೇಕಡಾ 86ರಷ್ಟು ಮಳೆಯಾಗುವ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 11-20 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !