ಕರಾವಳಿ ಜಿಲ್ಲೆಗಳು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಧಾರವಾಡ, ಹಾವೇರಿ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ ಇಂದು (ಜೂನ್ 27) ಭಾರೀ ಮಳೆ ಮತ್ತು ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು (ಜೂನ್ 27) ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಮಂಜೂರು ಮಾಡಿದ್ದಾರೆ.
ಕೊಡಗು ಜಿಲ್ಲೆಯ ಹಲವೆಡೆ ವರುಣಾರ್ಭಟ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿರಾಜಪೇಟೆ ತಾಲೂಕು ಹಾಗೂ ಪೊನ್ನಂಪೇಟೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ.