ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದಾಗ್ಯೂ, ಉತ್ತರ ಒಳನಾಡಿನ ಪ್ರದೇಶಗಳಲ್ಲಿ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.
ಗಾಳಿಯ ವೇಗ ಗಂಟೆಗೆ 30-40 ಕಿಮೀ, ತೀವ್ರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.