ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದಾಗಿ ರಾಜ್ಯದ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಮತ್ತು ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು-ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.