March 25, 2026
Wednesday, March 25, 2026
spot_img

WEATHER | ವರುಣನ ಬಿಡುವು, ಬಿಸಿಲ ಮೇಲುಗೈ: ಇಂದು ನಿಮ್ಮ ಜಿಲ್ಲೆಯ ಹವಾಮಾನ ಹೇಗಿದೆ?

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಬಿಸಿಲಿನ ತಾಪ ಹೆಚ್ಚಾಗಿದ್ದು, ಅಲ್ಲೊಂದು ಇಲ್ಲೊಂದು ಗುಡುಗು ಸಹಿತ ಮಳೆಯಾದ ವರದಿಗಳಿದ್ದವು. ಆದರೆ, ಇಂದಿನಿಂದ ರಾಜ್ಯದ ಬಹುತೇಕ ಜಿಲ್ಲೆಗಳ ಹವಾಮಾನದಲ್ಲಿ ಬದಲಾವಣೆಯಾಗಲಿದ್ದು, ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜಧಾನಿಯಲ್ಲಿ ಹಗಲು ಪೂರ್ತಿ ಬಿಸಿಲಿದ್ದರೂ, ಸಂಜೆಯ ವೇಳೆಗೆ ಮೋಡ ಮುಸುಕಿದ ವಾತಾವರಣ ಕಂಡುಬರಲಿದೆ.

ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ, ಕೋಲಾರ, ಹಾಸನ ಸೇರಿದಂತೆ ದಕ್ಷಿಣದ ಎಲ್ಲಾ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇಲ್ಲದೆ ಶುಷ್ಕ ಹವೆ ಮುಂದುವರಿಯಲಿದೆ.

ಬೆಳಗಾವಿ, ಬೀದರ್, ಕಲಬುರಗಿ ಹಾಗೂ ಬಾಗಲಕೋಟೆ ಸೇರಿದಂತೆ ಈ ಭಾಗದ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಇರುವ ಒಣಹವೆಯ ಸ್ಥಿತಿಯೇ ಇಂದೂ ಇರಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !