October 14, 2026
Wednesday, October 14, 2026
spot_img

WEATHER | ರಾಜ್ಯದ ಜನತೆಗೆ ವರುಣನ ತಂಪು: ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಹೈ ಅಲರ್ಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮೇ 16ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ.

ಮೇ 16ರಂದು ದಕ್ಷಿಣ ಒಳನಾಡಿನ ಕೆಲವು ಆಯ್ದ ಸ್ಥಳಗಳಲ್ಲಿ ಮಳೆ ಅಬ್ಬರ ಹೆಚ್ಚಿರಲಿದ್ದು, ಪ್ರಮುಖವಾಗಿ ಈ ಕೆಳಗಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ:

ತುಮಕೂರು

ಚಿತ್ರದುರ್ಗ

ಮಂಡ್ಯ ಹಾಗೂ ಮೈಸೂರು

ಚಾಮರಾಜನಗರ

ಬಳ್ಳಾರಿ ಮತ್ತು ವಿಜಯನಗರ

ಚಿಕ್ಕಬಳ್ಳಾಪುರ

ಮತ್ತೊಂದೆಡೆ, ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನಗಳ ಕಾಲ ಬಿಸಿಲ ತಾಪ ಏರಿಕೆಯಾಗಲಿದ್ದು, ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್‌ವರೆಗೆ ಹೆಚ್ಚಾಗುವ ಸಾಧ್ಯತೆಯಿದೆ.

ಬೆಂಗಳೂರು: ಗರಿಷ್ಠ 34°C, ಕನಿಷ್ಠ 23°C.

ರಾಯಚೂರು: ಗರಿಷ್ಠ 39°C, ಕನಿಷ್ಠ 30°C.

Must Read