April 30, 2026
Thursday, April 30, 2026
spot_img

WEATHER | ಕರುನಾಡಿನಾದ್ಯಂತ ವರುಣನ ಆರ್ಭಟ: 22 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಎಚ್ಚರಿಕೆ!

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ವರುಣನ ಅಬ್ಬರ ಜೋರಾಗಿದ್ದು, ಇಂದೂ ಕೂಡ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ರಾಜ್ಯದ ಒಟ್ಟು 22 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಕರ್ನಾಟಕದ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇತ್ತ ಮಲೆನಾಡು ಮತ್ತು ಕರಾವಳಿ ಭಾಗದ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆ ಆರ್ಭಟಿಸಲಿದೆ. ಅಷ್ಟೇ ಅಲ್ಲದೆ, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ, ಮಂಡ್ಯ, ರಾಮನಗರ, ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದ ಜೊತೆಗೆ ಕಲ್ಬುರ್ಗಿ, ಬೀದರ್, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಗುಡುಗು ಸಹಿತ ಮಳೆ ನಿರೀಕ್ಷಿಸಲಾಗಿದೆ.

ತುಮಕೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಮಳೆ ಜೋರಾಗಿರುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !