July 22, 2026
Wednesday, July 22, 2026
spot_img

WEATHER | ರಾಜ್ಯದಲ್ಲಿ ಮುಂದುವರಿದ ವರುಣನ ಆರ್ಭಟ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈಋತ್ಯ ಮುಂಗಾರು ಬಿರುಸುಗೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ, ಮಲೆನಾಡಿಗೆ ಹೈ ಅಲರ್ಟ್

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಗುಡ್ಡ ಕುಸಿತದ ಆತಂಕ ಇರುವುದರಿಂದ ಸಾರ್ವಜನಿಕರು ಹಾಗೂ ಪ್ರವಾಸಿಗರು ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.

ಇದನ್ನೂ ಓದಿ:

ಬೆಂಗಳೂರುದಲ್ಲೂ ಮಳೆಯ ಮುನ್ಸೂಚನೆ

ರಾಜಧಾನಿ ಬೆಂಗಳೂರಿನಲ್ಲಿ ದಿನವಿಡೀ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ತಾಪಮಾನ 20 ರಿಂದ 27 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ.

ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !