July 26, 2026
Sunday, July 26, 2026
spot_img

WEATHER | ರಾಜ್ಯಾದ್ಯಂತ ವರುಣನ ಆರ್ಭಟ: ಮಲೆನಾಡು, ಕರಾವಳಿಯಲ್ಲಿ ಜಲಪ್ರಳಯದ ಭೀತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ಮಳೆ ತೀವ್ರಗೊಂಡಿದೆ. ಭಾರಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಉತ್ತರ ಕನ್ನಡದ ಪ್ರಸಿದ್ಧ ಗೋಕರ್ಣ ದೇವಾಲಯದ ಗರ್ಭಗುಡಿಗೂ ನೀರು ನುಗ್ಗಿದೆ. ಕರಾವಳಿ ತೀರದಲ್ಲಿ ಮಳೆ ಮುಂದುವರಿಯಲಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಕರಾವಳಿಗೆ ‘ಆರೆಂಜ್ ಅಲರ್ಟ್’: ಡಿಸಿ ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಸೂಚನೆ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜುಲೈ 2 ರವರೆಗೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮಳೆಯೊಂದಿಗೆ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಸಾರ್ವಜನಿಕರು ಮತ್ತು ಪ್ರವಾಸಿಗರು ನದಿ ದಡ ಹಾಗೂ ಕಡಲತೀರಗಳಿಗೆ ತೆರಳದಂತೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಉತ್ತರ ಮತ್ತು ದಕ್ಷಿಣ ಒಳನಾಡಿನ ಹವಾಮಾನ ವರದಿ

  • ಉತ್ತರ ಒಳನಾಡು: ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಾಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಇಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ.
  • ಮಲೆನಾಡು ಮತ್ತು ದಕ್ಷಿಣ ಒಳನಾಡು: ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ.

ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳ ಸ್ಥಿತಿ

ಸಿಲಿಕಾನ್ ಸಿಟಿ ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಕೊಡಗು, ಹಾಸನ, ತುಮಕೂರು, ಕೋಲಾರ ಮತ್ತು ಚಿತ್ರದುರ್ಗ ಸೇರಿದಂತೆ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಸಾರ್ವಜನಿಕರು ಹವಾಮಾನ ಇಲಾಖೆಯ ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಕೋರಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !