ಎರಡು ದಿನಗಳ ನಂತರ ಮತ್ತೆ ವರುಣ ಅಬ್ಬರಿಸಿದ್ದು, ರಾಜ್ಯದಲ್ಲಿ ಮಳೆರಾಯನ ಅಟ್ಟಹಾಸ ಮುಂದುವರೆದಿದೆ.
ಕರ್ನಾಟಕದ ಕರಾವಳಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಎರಡು ದಿನಗಳ ನಂತರ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗಿದ್ದು, ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.