October 30, 2026
Friday, October 30, 2026
spot_img

WEATHER | ರಾಜ್ಯದಲ್ಲಿ ಬದಲಾಗಲಿದೆ ಹವಾಮಾನ: ಎಲ್ಲೆಲ್ಲಿ ಒಣಹವೆ? ಎಲ್ಲೆಲ್ಲಿ ಮಳೆಯ ಸಿಂಚನ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದು ಕರಾವಳಿ ಭಾಗದ ಪ್ರಮುಖ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಮಳೆಯಿಲ್ಲದೆ ಒಣಹವೆ ಮುಂದುವರಿಯಲಿದೆ. ಆದರೆ, ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ.

ಉಳಿದಂತೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣವಿರಲಿದೆ.

ದಕ್ಷಿಣ ಒಳನಾಡಿನ ಪ್ರಮುಖ ಮಲೆನಾಡು ಭಾಗಗಳಾದ ಶಿವಮೊಗ್ಗ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಆದರೆ ಬೆಂಗಳೂರು ಸೇರಿದಂತೆ ಮೈಸೂರು, ಚಾಮರಾಜನಗರ, ಕೊಡಗು, ಕೋಲಾರ, ರಾಮನಗರ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಮಂಡ್ಯ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಎಂದಿನಂತೆ ಒಣಹವೆ ಮುಂದುವರಿಯಲಿದೆ.

Must Read