ದಕ್ಷಿಣ ಮತ್ತು ಉತ್ತರ ಒಳಭಾಗ, ಗುಡ್ಡಗಾಡು ಪ್ರದೇಶಗಳು ಮತ್ತು ಕರಾವಳಿ ಪ್ರದೇಶಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕೆಲವೆಡೆ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಭಾಗಗಳಲ್ಲಿ ಭಾರೀ ಮಳೆಯಾಗಬಹುದು. ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರ್ಗಿ, ಯಾದಗಿರಿ, ಬಾಗಲಕೋಟೆ, ವಿಜಯಪುರದಲ್ಲಿ ಸಾಧಾರಣ ಮಳೆಯಾಗಲಿದೆ.
ಮಲೆನಾಡಿನ ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಭಾರೀ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.