ಇಂದು ರಾಜ್ಯದ ಕೆಲವೆಡೆ ಒಣಹವೆ ಇದ್ದರೆ ಇನ್ನೂ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಹಾವೇರಿ, ಬೆಂಗಳೂರು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಗದಗ, ಧಾರವಾಡ, ಬೀದರ್, ಬೆಳಗಾವಿಯಲ್ಲೂ ಕೂಡ ಮಳೆಯಾಗುವ ನಿರೀಕ್ಷೆ ಇದೆ.
ಕಲಬುರಗಿಯಲ್ಲಿ 41.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 26.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 37.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 39.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.